ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶ ಎಲ್ಲಿ ನೋಡಬಹುದು?
ಕರ್ನಾಟಕದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್ಸೈಟ್ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್ಸೈಟ್ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.