ಶಿವಮೊಗ್ಗ:- ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಅನ್ಯಕೋಮಿನ ಇಬ್ಬರು ಯುವಕರು ಬರ್ಬರ ಕೊಲೆ ನಡೆದಿರುವ ಘಟನೆ ಜರುಗಿದೆ.
ನನ್ನ ಬೆತ್ತಲೆ ವಿಡಿಯೋ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು -ದೇವರಾಜೇಗೌಡ
30 ವರ್ಷದ ಗೌಸ್ ಮತ್ತು 35 ವರ್ಷದ ಶೋಹೆಬ್ ಕೊಲೆಯಾದ ವ್ಯಕ್ತಿಗಳು ಎನ್ನಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆ, ಇಬ್ಬರ ಹತ್ಯೆ ನಡೆದಿರುವ ಶಂಕೆಯಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.