ಬೆಂಗಳೂರು:- ಪರಪ್ಪನ ಅಗ್ರಹಾರ ಜೈಲು ಪಾಲಾದ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ 4567 ನೀಡಲಾಗಿದೆ.
DGF ಗೋಲ್ಡ್ ಆ್ಯಂಡ್ ಡೈಮಂಡ್ಸ್ ಕಂಪನಿಯಿಂದ ವಂಚನೆ..ದೂರು ಕೊಟ್ಟ ಮಹಿಳೆ!
ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣಗೆ 17ನೇ ಎಸಿಎಂಎಂ ಕೋರ್ಟ್ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದರಿಂದ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ಜೈಲು ಅಧಿಕಾರಿಗಳು ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ್ದಾರೆ. ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆ ರೇವಣ್ಣ ವಿಚಾರಣಾಧೀನ ಬಂಧಿ ನಂಬರ್ 4567ನೀಡಲಾಗಿದೆ.