ಬೆಂಗಳೂರು:- ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದಿದ್ದಾರೆ.
Breaking: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೆಚ್ಚಾಯ್ತು ಮನೆ ಬಾಡಿಗೆ ದರ…
ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ನಿನ್ನೆ ಎಸ್ಐಟಿ ಕಸ್ಟಡಿ ಅವಧಿ ಅಂತ್ಯ ಬಳಿಕ ಕೋರ್ಟ್, ನ್ಯಾಯಾಂಗ ಬಂಧನ ವಿಧಿಸಿತ್ತು. ಬಿಗಿ ಬಂದೋಬಸ್ತ್ನಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ರೇವಣ್ಣ ಸೆರೆವಾಸ ಅನುಭವಿಸುತ್ತಿದ್ದಾರೆ.
ರಾಜಕಾರಣಿಯಾಗಿ, ಶಾಸಕರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ, ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್ನಲ್ಲಿ 1 ರಾತ್ರಿ ಕಾಲ ಕಳೆದಿದ್ದಾರೆ. ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್, ಸಾಂಬಾರ್ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆಯನ್ನು ಪಡೆದಿದ್ದಾರೆ.
ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಜಾರಿದ್ದಾರೆ. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಯೋಚಿಸುತ್ತಿದ್ದರು. ಬಳಿಕ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದ್ದಾರೆ. ಇನ್ನು ಹೆಚ್.ಡಿ.ರೇವಣ್ಣ ಆರೋಗ್ಯ ಸರಿ ಇಲ್ಲದ ಕಾರಣ ನಿನ್ನೆ ರಾತ್ರಿ ಜೈಲಾಧಿಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ. ಎಸ್ಐಟಿ ಕಸ್ಟಡಿ ಅವಧಿ ಅಂತ್ಯವಾಗಿದ್ದರಿಂದ 17ನೇ ACMMಗೆ ರೇವಣ್ಣರನ್ನು ನಿನ್ನೆ ಹಾಜರು ಪಡಿಸಲಾಗಿತ್ತು. ಕೋರ್ಟ್ಗೆ ರಿಮಾಂಡ್ ಅರ್ಜಿ ಸಲ್ಲಿಸಿದ ಎಸ್ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ವಹಿಸುವಂತೆ ಮನವಿ ಮಾಡಿದ್ದರು. ಪ್ರಕರಣದಲ್ಲಿ ಎರಡು ಕಡೆಯ ವಾದ ಆಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರು ಮಾರ್ಚ್ 14 ರವರೆಗೆ ಹೆಚ್.ಡಿ.ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು.
ಇದೇ ವೇಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿಯ ವಿಚಾರಣೆ ಮಾಡಲಾಗಿತ್ತು. ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.