ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10:30ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.ಮಾ.25ರಿಂದ ಏ.6ರವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಂದು ಫಲಿತಾಂಶ ಲಭ್ಯವಾಗಲಿದೆ. 8.69 ಲಕ್ಷ ಸಾಮಾನ್ಯ ವಿದ್ಯಾರ್ಥಿಗಳ ಜೊತೆ 18,225 ಖಾಸಗಿ ವಿದ್ಯಾರ್ಥಿಗಳು & 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಹೀಗಾಗಿ ಇವರೆಲ್ಲರ ಭವಿಷ್ಯವು ಮೇ 09 ಎಂದರೆ, ಇಂದು ನಿರ್ಧಾರ ಆಗಲಿದೆ. ಫಲಿತಾಂಶ ನೋಡಲು ನೀವು kseeb.kar.nic.in ಮತ್ತು karresults.nic.in ವೆಬ್ಸೈಟ್ಗೆ ಭೇಟಿ ನೀಡಲು ತಿಳಿಸಲಾಗಿದೆ. ಹಾಗೇ ಕೆಲವು ಶಾಲೆಗಳಲ್ಲಿ ಫಲಿತಾಂಶ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಕೂಡ ಮಾಡಲಾಗಿದ್ದು. ಕರ್ನಾಟಕ ಪರೀಕ್ಷಾ ಮಂಡಳಿಯು ಸುದ್ದಿಗೋಷ್ಠಿ ನಡೆಸಲಿದೆ. ಆ ನಂತರ ಎಸ್ಎಸ್ಎಲ್ಸಿ ಫಲಿತಾಂಶ ಅಧಿಕೃತವಾಗಿ ರಿಲೀಸ್ ಆಗಲಿದೆ.
ಒಟ್ಟಾರೆ.. ಶೈಕ್ಷಣಿಕ ಗುಣಮಟ್ಟ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್ಎಸ್ಎಲ್ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆದಿದೆ. ಯಾಕಂದ್ರೆ ಕರ್ನಾಟಕದಲ್ಲಿ ಅದ್ರಲ್ಲೂ ನಮ್ಮ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಇದೀಗ 2023 & 2024ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಆಗಲಿದೆ. ಹೀಗಾಗಿ ಇಂದು ಬಹುಮುಖ್ಯ ಸುದ್ದಿಗೋಷ್ಠಿ ನಡೆಸಲು ಇದೀಗ ಕರ್ನಾಟಕ ಪರೀಕ್ಷಾ ಮಂಡಳಿ ಸಿದ್ಧತೆ ನಡೆಸಿದೆ.