ಕೋಲಾರ: 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕೋಲಾರ ಜಿಲ್ಲೆಗೆ ಕೆಜಿಎಫ್ ವಿದ್ಯಾರ್ಥಿನಿ ದರ್ಷಿತ ಟಾಪರ್ ಆಗಿ ಬಂದಿದ್ದಾರೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
623 ಅಂಕಗಳು ಪಡೆದಿದ್ದು, ದರ್ಷಿತ ಕೋಲಾರ ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ ವಿದ್ಯಾರ್ಥಿನಿಯಾಗಿದ್ದಾರೆ. ಕೆಜಿಎಫ್ ನಗರದ ಜೈನ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ರಾಬರ್ಟ್ ಸನ್ ಪೇಟೆಯ ನಗರದ ಸ್ವರ್ಣ ನಗರದ ಆನಂದ್ ಹಾಗೂ ಪದ್ಮಶ್ರೀ ದಂಪತಿ ತಮ್ಮ ಪುತ್ರಿಯ ಸಾಧನೆಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ.