ಕೊಡಗು:– ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆಯಲ್ಲಿ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ಮುರಿದು ಬಿದ್ದ ಘಟನೆ ನಡೆದಿದೆ.
ಕರ್ನಾಟಕ ಬಿಜೆಪಿ ಐಟಿ ಸೆಲ್ ಸಂಚಾಲಕ ಸಂಚಾಲಕ ಪ್ರಶಾಂತ್ ಮಾಕನೂರು ಅರೆಸ್ಟ್!
ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿ ಮತ್ತು ತುಮಕೂರು ಜಿಲ್ಲೆಯ ಯುವಕ ನೊಂದಿಗೆ 5/5/24 ರಂದು ಮದುವೆ ನಿಶ್ಚಯಾಗಿತ್ತು. ವಿವಾಹಕ್ಕೂ ಮೊದಲು ವರನ ಕಡೆಯವರಿಂದ ವರದಕ್ಷಿಣೆ ಕೊಡುವಂತೆ ಒತ್ತಾಯ ಕೇಳಿಬಂದಿದೆ. ಅಲ್ಲದೇ, ಚಿನ್ನ ಮತ್ತು ಬೆಂಗಳೂರಿನಲ್ಲಿ ಸೈಟ್ ಕೊಡಿಸುವಂತೆಯೂ ವರನ ಪೋಷಕರು ಒತ್ತಾಯ ಮಾಡಿದ್ದಾರೆ ಎಂಬ ಆರೋಪ ವಧುವಿನ ಮನೆಯವರ ಕಡೆಯಿಂದ ಕೇಳಿಬಂದಿದೆ. ಮ್ಯಾಟ್ರಿಮೊನಿಯಲ್ಲಿ ಹುಡುಗ ಹುಡುಗಿ ಪರಿಚಯವಾಗಿ, ಮನೆಯರು ಸೇರಿ ಮದುವೆ ನಿಶ್ಚಿಯವಾಗಿತ್ತು. ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರನ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ ಎಂದು ಸಣ್ಣ ಗಲಾಟೆ ನಡೆದಿತ್ತು.
ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ರಾತ್ರಿ ಮದುವೆಯೇ ಬೇಡ ಎಂದು ವರ ಉಂಗುರ ಕಳಚಿಕೊಟ್ಟಿದ್ದಾನೆ. ಘಟನೆಯಿಂದ ಬೇಸತ್ತ ವಧು ಕೂಡ ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದ್ದಾಳೆ.