ಮಂಡ್ಯ:- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ಹಿನ್ನೆಲೆ ಮಂಡ್ಯದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ಹೋಬಳಿಯ ತಗ್ಗಹಳ್ಳಿಯಲ್ಲಿ ಜರುಗಿದೆ.
ಕಂಪ್ಲಿ ತಾಲೂಕಿನಲ್ಲಿ 100% ಫಲಿತಾಂಶ ಪಡೆದ ನಿವೇದಿತ ಆಂಗ್ಲ ಮಾಧ್ಯಮ ಶಾಲೆ!
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ತಗ್ಗಹಳ್ಳಿಯಲ್ಲಿ ಘಟನೆ ಜರುಗಿದ್ದು, ಲಿಖಿತ್ (15) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶ ನೋಡಲು ಶಾಲೆ ಬಳಿ ಲಿಖಿತ್ ಹೋಗಿದ್ದ. ಎರಡು ವಿಷಯದಲ್ಲಿ ಅನುತ್ತೀರ್ಣ ಆಗಿದ್ದೀಯ ಎಂದು ಶಿಕ್ಷಕರು ಹೇಳಿದ್ದಾರೆ. ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾರೆ. ಜಮೀನಿನ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲಾಗಿದ್ದು, ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ಜರುಗಿದೆ.
ಗ್ರಾಮದ ಹೆಚ್.ಎಂ.ಅಮೃತ(15) ಮೃತ ಬಾಲಕಿ ಎನ್ನಲಾಗಿದೆ. ನಗರಕೆರೆ ಗ್ರಾಮದ ಪೂರ್ಣಿಮಾ ಪ್ರೌಢಶಾಲೆಯಲ್ಲಿ ಅಮೃತ ಓದುತ್ತಿದ್ದರು. 353 ಅಂಕಗಳೊಂದಿಗೆ ಶೇ.57ರಷ್ಟು ಫಲಿತಾಂಶ ಪಡೆದು ಅಮೃತ ಉತ್ತೀರ್ಣರಾಗಿದ್ದರು. ಪರೀಕ್ಷೆಯಲ್ಲಿ ಪಾಸಾಗಿದ್ದರೂ ನಿರೀಕ್ಷಿತ ಅಂಕ ಬಂದಿಲ್ಲವೆಂದು ಮನನೊಂದಿದ್ದ ಅಮೃತ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ