ಬಾಗಲಕೋಟೆl;- ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿ ತಿಂಗಳ ಸ್ಪೂರ್ತಿದಾಯಕ ಪತ್ರ ಬರೆಯುವ ಮೂಲಕ ವಿದ್ಯಾರ್ಥಿಗಳಲ್ಲಿ ಹುರುಪು ತುಂಬುವ ಕೆಲಸ ಮಾಡಿದ ಹಿನ್ನಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಯೊಬ್ಬಳು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮುವಂತೆ ಮಾಡಿದ್ದಾರೆ. ಆ ಮೂಲಕ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಪ್ರೇರಣಾದಾಯಕ ಪತ್ರದ ಸಾರ್ಥಕತೆ ಮೆರೆದಿದ್ದಾರೆ.
ಅಸಲಿ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್…!
ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯ ಶಾಲಾ ಮಕ್ಕಳಿಗೆ ವಿದ್ಯಾಬ್ಯಾಸ ಕುರಿತಂತೆ ಅಬ್ಯಾಸ ಮಾಡುವ ಹಾಗೂ ಪರೀಕ್ಷೆ ಎದುರಿಸುವ, ಬಾಲ್ಯ ವಿವಾಹದಿಂದ ಮಕ್ಕಳ ಮೇಲೆ ಉಂಟಾಗುವ ಪರಿಣಾಮ ಸೇರಿದಂತೆ ಇನ್ನು ಅನೇಕ ಉಪಯುಕ್ತ ಮಾಹಿತಿಯನ್ನು ಮಕ್ಕಳಿಗೆ ಮನದಟ್ಟುವಂತೆ ಭಾವನಾತ್ಮಕವುಳ್ಳ ಪತ್ರವನ್ನು ಪ್ರತಿ ತಿಂಗಳು ಬರೆಯುತ್ತಿದ್ದರು. ಇಲ್ಲಿಯವರೆಗೆ ಒಟ್ಟು ೧೦ ಪತ್ರವನ್ನು ಬರೆದಿದ್ದಾರೆ. ಇದಕ್ಕೆ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದರ ಪರಿಣಾಮ ಜಿಲ್ಲೆಯ ಅಂಕಿತಾ ಕೊಣ್ಣೂರು ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಲು ಸಾಧ್ಯವಾಯಿತು.
ಪ್ರಕಾಶ ಕುಂಬಾರ
ಬಾಗಲಕೋಟೆ