ವಿಜಯನಗರ:- ರಸ್ತೆ ಡಿವೈಡ್ಗೆ ಗುದ್ದಿ ಕಾರು ಪಲ್ಟಿ ಹೊಡೆದ ಪರಿಣಾಮ ಮೂವರಿಗೆ ಗಂಭೀರವಾಗಿದ್ದು, ಅದರಲ್ಲಿ ಓರ್ವ ದಾರಿ ಮಧ್ಯೆದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮ ಬಳಿ ರಾ.ಹೆ 50 ರಲ್ಲಿ ಜರುಗಿದೆ.
ಬೆಂಗಳೂರಿನಿಂದ ಕೊಪ್ಪಳ ಕಡೆ ಚಲಿಸುತ್ತಿದ್ದ ಕಾರು ಹೆದ್ದಾರಿ ಡಿವೈಡ್ಗೆ ಗುದ್ದಿ ಪಲ್ಟಿಯಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಮತ್ತೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿದೆ.
ಸಮಯ ಪ್ರಜ್ಞೆ ಮೆರೆದ ಸ್ಥಳೀಯರಿಂದ ಅದೃಷ್ಟವಶಾತ್ ಅಪಾಯ ತಪ್ಪಿದೆ. ಘಟನಾ ಸ್ಥಳಕ್ಕೆ ಕಾನಾ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗಾಯಗೊಂಡರನ್ನ ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ
ಘಟನೆಯಲ್ಲಿ ಗಾಯಗೊಂಡ ಪೈಕಿ ಓರ್ವ ವ್ಯಕ್ತಿ ಸಾವನ್ನಪ್ಪಿದ ವ್ಯಕ್ತಿ
ಕೊಪ್ಪಳ ಮೂಲದ ಶಿವಾನಂದ ಎನ್ನಲಾಗಿದೆ. ತಲೆ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಹಿನ್ನೆಲೆ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳು ಸುರೇಶ್, ಬಸವರಾಜ್ ಎಂಬುವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂವರು ಕೊಪ್ಪಳ ಮೂಲದವರು ಎಂದು ತಿಳಿದು ಬಂದಿದೆ.