ಬೆಂಗಳೂರು:- ಮೇ 18 ರವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Ration Card: ಇನ್ಮುಂದೆ ರೇಷನ್ ಕಾರ್ಡ್’ದಾರರಿಗೆ ಸಿಗಲಿದೆ ಕಾಂಡೋಮ್ ಜೊತೆ ಈ 46 ವಸ್ತು… ಎಲ್ಲವೂ ಉಚಿತ!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಹಾಸಬ, ಕೊಡಗು, ಮೈಸೂರು,ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ,ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ.
ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಗುಬ್ಬಿ, ಮಂಡ್ಯ, ಕೃಷ್ಣರಾಜಸಾಗರ, ಕೆಆರ್ನಗರ, ಹೆಸರಘಟ್ಟ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಸಂತೆಬೆನ್ನೂರು, ಕೃಷ್ಣರಾಜಪೇಟೆ, ಅರಕಲಗೂಡು, ಚಿಕ್ಕಮಗಳೂರು, ಮಾಗಡಿ, ಕುಶಾಲನಗರ, ಅಜ್ಜಂಪುರ, ಪಾವಗಡದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಎಚ್ಎಎಲ್ನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.