ತುಮಕೂರು:- ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್ ಬಳಿ ಜರುಗಿದೆ.
ಕಾರಿನಲ್ಲಿದ್ದ ಇಬ್ಬರೂ ಶಿಕ್ಷಕರು ಸ್ಥಳದಲ್ಲೇ ಸಾವು,ಇನ್ನಿಬ್ಬರು ಶಿಕ್ಷಕರ ಸ್ಥಿತಿ ಗಂಭೀರವಾಗಿದೆ. ತುಮಕೂರಿನಿಂದ ಮದುವೆ ಆರತಕ್ಷತೆ ಮುಗಿಸಿ ಪಾವಗಡಕ್ಕೆ ವಾಪಸ್ಸು ಹೋಗುತ್ತಿರುವಾಗ ದುರ್ಘಟನೆ ಸಂಭವಿಸಿದೆ. ಓ.ಧನಂಜಯ(58) ಪಾವಗಡ ಸರ್ಕಾರಿ ಜೂನಿಯರ ಕಾಲೇಜಿನ ಪ್ರೌಢಶಾಲಾ ವಿಭಾಗ ಪ್ರಾಂಶುಪಾಲ,ಶ್ರೀ ಕೃಷ್ಣ(49)
ಪಾವಗಡ ತಾಲ್ಲೂಕಿನ ಗೌಡೇಟಿ ಪ್ರೌಡ ಶಾಲೆಯ ಮುಖ್ಯ ಶಿಕ್ಷಕ ಮೃತ ದುರ್ದೈವಿಗಳು ಎನ್ನಲಾಗಿದೆ. ಶಿಕ್ಷಕರುಗಳಾದ ನರಸಿಂಹ ಮತ್ತು ವೆಂಕಟಾಚಲಪತಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.