ಬೆಂಗಳೂರು:- ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
IPL 2024: ಡೆಲ್ಲಿ ವಿರುದ್ಧ ಗೆಲುವು ಬೆನ್ನಲ್ಲೇ ಅಂಕಪಟ್ಟಿಯಲ್ಲಿ 2 ಸ್ಥಾನ ಮೇಲೇರಿದ RCB..!
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ. ಇನ್ನುಳಿದಂತೆ ತುಮಕೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಕೋಲಾರ,ದಾವಣಗೆರೆ, ಚಾಮರಾಜನಗರ, ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಹುಬ್ಬಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುಳ್ಯ, ಹಳಿಯಾಳ, ಸಂಕೇಶ್ವರ, ಜಯಪುರ, ಬೆಳಗಾವಿ ಪಿಟಿಒ, ಕುಕನೂರು, ಮುನಿರಾಬಾದ್, ನಿಪ್ಪಾಣಿ, ಬಂಡೀಪುರ, ಭಾಗಮಂಡಲ, ಪೊನ್ನಂಪೇಟೆ, ಕಿರವತ್ತಿ, ಕೋಟ, ದೇವರಹಿಪ್ಪರಗಿ, ಅಣ್ಣಿಗೆರೆ, ಕಲಘಟಗಿ, ಹಿಡಕಲ್ ಅಣೆಕಟ್ಟು, ಹುಕ್ಕೇರಿ, ಹಗರಿಬೊಮ್ಮನಹಳ್ಳಿ, ಕಳಸ, ಬೇಗೂರು, ವಿರಾಜಪೇಟೆ, ಉಡುಪಿ, ಮುಂಡಗೋಡು, ಪುತ್ತೂರು, ಚಿಕ್ಕೋಡಿ, ಧಾರವಾಡ, ವಿಜಯಪುರ, ಇಂಡಿ, ದೇವದುರ್ಗ, ಕಡೂರು,ಹರಪನಹಳ್ಳಿ, ಬೆಂಗಳೂರಿನಲ್ಲಿ ಮಳೆಯಾಗಿದೆ.
ಇಂದು ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.