ಬೆಂಗಳೂರು:-ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಧಪಟ್ಟಂತೆ ಎಚ್ಡಿ ರೇವಣ್ಣಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೆಚ್.ಡಿ ರೇವಣ್ಣವನ್ನು ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಷರತ್ತು ಬದ್ಧ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ರೇವಣ್ಣ ಅವರು ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಎಸ್ಐಟಿ ಬಂಧನದ ಬಳಿಕ ಹೆಚ್.ಡಿ ರೇವಣ್ಣ ಅವರು ಜಾಮೀನಿಗಾಗಿ ಜನಪ್ರತಿನಿಧಿಗಳ ನ್ಯಾಯಾಲಯ ಮೊರೆ ಹೋಗಿದ್ದರು. ಇಂದು ಜಾಮೀನಿನ ಅರ್ಜಿ ವಿಚಾರಣೆ ಮುಂದುವರಿದಿದ್ದು, ರೇವಣ್ಣ ಪರ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದರು. ಎಸ್ಐಟಿ ಪರ ಎಸ್ಎಸ್ಪಿ ಜಾಯ್ನಾ ಕೊಥಾರಿ ಅವರು ವಾದ ಮಂಡಿಸಿದರು ಎಂದು ಹೇಳಲಾಗಿದೆ.
ಇನ್ನೂ ಪ್ರಜ್ವಲ್ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ.