ಬಳ್ಳಾರಿ:- ಈಶಾನ್ಯ ಪದವಿದರ ಕ್ಷೇತ್ರದ ಬಿಜೆಪಿ ಎಂಎಲ್ಸಿ ಅಭ್ಯರ್ಥಿ ಅಮರನಾಥ್ ಪಾಟೀಲ ಸುದ್ದಿಗೋಷ್ಠಿ ನಡೆಸಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಈಶಾನ್ಯ ಪದವೀದರ ಕ್ಷೇತ್ರ ಘೋಷಣೆ ಮಾಡಲಾಗಿದೆ. ಈಗಾಗಲೇ 2012ರಲ್ಲಿ ಈ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದೇ. ಇದೀಗ ಪಕ್ಷ ಮತ್ತೊಮ್ಮೆ ಅವಕಾಶ ನೀಡಿದೆ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿರುವ ರಾಜ್ಯ ರಾಷ್ಟ್ರೀಯ ನಾಯಕರಿಗೆ ಧನ್ಯವಾದಗಳು.
ಪಕ್ಷದ ಹಲವು ವಿಭಾಗದಲ್ಲಿ ಕೆಲಸ ಮಾಡಿದ ಅನುಭವಿದೆ. ಈ ಹಿಂದೆ ಹೈದರಾಬಾದ್ ಕರ್ನಾಟಕ ಬೋರ್ಡ್ನ ಅಧ್ಯಕ್ಷನಾಗಿದ್ದೇನೆ. ಪದವಿದರ ಕ್ಷೇತ್ರದಲ್ಲಿ ಮತ್ತೊಮ್ಮೆ ಆಯ್ಕೆ ಮಾಡುವ ವಿಶ್ವಾಸವಿದೆ. ನಮ್ಮ ಭಾಗದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನ ಮೇಲಿಟ್ಟಿರೋ ಭರವಸೆಯಂತೆ ಕೆಲಸ ಮಾಡಿದ್ದೇನೆ. ಹೈಕ ಭಾಗದ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ದೇನೆ. ಅಂದು 371ಜೆ ಅನುಷ್ಠಾನಕ್ಕೆ ಒತ್ತಾಯಿಸಿದೆ.
ಇಂದು ಖಾಲಿ ಹುದ್ದೆ ಭರ್ತಿ ಮಾಡಲು ಹೋರಾಟ ಮಾಡುವೆ. ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಹೋರಾಟ ನಿರಂತರವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ಎಸ್ಎಲ್ ಮತ್ತು ಪಿಯುಸಿ ಫಲಿತಾಂಶ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡುವೆ. ಚುನಾವಣೆ ಎದುರಿಸಲು ಪಕ್ಷ ಮತ್ತು ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎಂದರು. ಹಾಗೂ ಇದೇ ವೇಳೆ ಪರಿಷತ್ ಚುನಾವಣೆಯಲ್ಲಿ ಮೋದಿ ಜಪ ಮಾಡಿದ್ದಾರೆ. ಯುವಕರ ಕೈಗೆ ಕೆಲಸ ಮತ್ತು ಕಲ್ಯಾಣ ಕರ್ನಾಟಕ ಭಾಗದ ಯುವಕರ ಮೀಸಲಾತಿಗಾಗಿ ಹೋರಾಟ ಮಾಡ್ತೇನೆ ಎಂದರು.