ಹುಬ್ಬಳ್ಳಿ:- ಎನ್ ಇಪಿ ರದ್ಧತಿ ವಿರೋಧಿಸಿ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಎದುರಿನ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಪ್ರಧಾನಿ ನರೇಂದ್ರ ಮೋದಿ ಒಟ್ಟು ಆಸ್ತಿಮೌಲ್ಯ ಎಷ್ಟು ಗೊತ್ತಾ!?.. ಕಾರೂ ಇಲ್ಲ, ಮನೆಯೂ ಇಲ್ಲ..!
ಪ್ರಸ್ತುತ ಜಾರಿಯಲ್ಲಿರುವ ಶಿಕ್ಷಣ ವ್ಯವಸ್ಥೆಯ ಸಾಧಕ–ಬಾಧಕಗಳ ಕುರಿತು ಚರ್ಚಿಸಿಲ್ಲ. ರಾಜಕೀಯ ಸೇಡು ತೀರಿಸಿಕೊಳ್ಳಲು ಶಿಕ್ಷಣ ಕ್ಷೇತ್ರವನ್ನು ಅಸ್ತ್ರವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ವಿದ್ಯಾರ್ಥಿ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.
ಪ್ರಸ್ತುತ ನಮ್ಮ ಶಿಕ್ಷಣ ಪದ್ಧತಿ ಬ್ರಿಟಿಷ್ ವಸಾಹತು ವ್ಯವಸ್ಥೆಯ ಮುಂದುವರಿದ ಭಾಗವಾಗಿದೆ. ಇದು ಗುಲಾಮಗಿರಿಯ ಮಾನಸಿಕತೆಯೂ ಹೌದು. ನಮ್ಮ ಭವ್ಯ ಇತಿಹಾಸವನ್ನು ಮರೆಮಾಚಿ ವಿದ್ಯಾರ್ಥಿಗಳಿಗೆ ದೇಶದ ಬಗ್ಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಇದೆಲ್ಲದಕ್ಕೂ ರಾಷ್ಟ್ರೀಯ ಶಿಕ್ಷಣ ನೀತಿ ಪರಿಹಾರವಾಗಿದೆ. ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾದ ತೀರ್ಮಾನ ಎಂದು ಆಕ್ರೋಶ ಹೊರ ಹಾಕಿದ್ದಾರೆ.