ವಿಜಯಪುರ: ನಾಲ್ಕು ತಿಂಗಳ ಹಿಂದೆಯಷ್ಟೆ ಪ್ರೀತಿಸಿ ಮದುವೆಯಾಗಿದ್ದ ನವದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ಮನೋಜಕುಮಾರ ಪೋಳ (30) ಮತ್ತು ರಾಖಿ (23) ಎಂದು ಗುರುತಿಸಲಾಗಿದೆ. ಇವರು ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ನಿನ್ನೆ ತಡರಾತ್ರಿ ಊಟ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೆಂಡತಿಯ ಪ್ರಜ್ಞೆ ತಪ್ಪಿಸಿ ಪರಪುರಷರಿಂದ ಅತ್ಯಾಚಾರ ಮಾಡಿಸ್ತಿದ್ದ ಪತಿ.! ಪಾಪಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?
ಮನೋಜಕುಮಾರ ಹಾಗೂ ರಾಖಿ ಇಬ್ಬರೇ ಮನೆಯಲ್ಲಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಮನೋಜಕುಮಾರ ತಾಯಿ ಭಾರತಿ ಅವರು ತಮ್ಮ ಮಗಳ ಊರಿಗೆ ಹೋಗಿದ್ದರು. ಇಂದು ಬೆಳಗ್ಗೆ ವಾಪಸ್ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಕುಸಿದು ಬಿದ್ದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.