ಬೆಳಗಾವಿ:– ಬೆಳಗಾವಿಯ ಮಹಾಂತೇಶನಗರದ ಬ್ರಿಡ್ಜ್ ಬಳಿ ಸ್ಕ್ರೂಡ್ರೈವರ್ನಿಂದ ಚುಚ್ಚಿ ಯುವಕನೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜರುಗಿದೆ.
Breaking: ರೈಲಿನಲ್ಲಿ ಟಿಕೆಟ್ ತೋರಿಸಿ ಎಂದ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕ ಹಲ್ಲೆ… !
22 ವರ್ಷದ ಇಬ್ರಾಹಿಂ ಗೌಸ್ ಕೊಲೆಯಾದ ಯುವಕ ಎನ್ನಲಾಗಿದೆ. ಪ್ರೇಯಸಿ ಜೊತೆ ಬೈಕ್ನಲ್ಲಿ ಹೊರಟಿದ್ದ ಆಕೆಯ ಸಹೋದರನನ್ನ ಅಡ್ಡಗಟ್ಟಿದ ಆರೋಪಿ ಮುಜಾಮಿಲ್ ಸತ್ತಿಗೇರಿ, ಸ್ಕ್ರೂಡ್ರೈವರ್ನಿಂದ ಇರಿದು ಪರಾರಿಯಾಗಿದ್ದ. ಗಾಯಾಳು ಗೌಸ್ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)