ಬೆಂಗಳೂರು:– ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 18 ರಿಂದ 20 ರವರೆಗೆ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೇಸಿಗೆಯಲ್ಲಿ ಮೈ ತುರಿಕೆ ಹೆಚ್ಚಾಗಿದ್ಯಾ!?.. ಹಾಗಿದ್ರೆ ಇದನ್ನು ಹಚ್ಚಿ.. ಎಲ್ಲವೂ ಮಾಯ!
ಬೆಂಗಳೂರು ನಗರದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದೆ. ಹಾಗೂ ಜೂನ್ ಆರಂಭದಲ್ಲೇ ಮುಂಗಾರು ಪ್ರವೇಶ ಸಾಧ್ಯತೆ ಇದೆಯಂತೆ. ಹವಾಮಾನ ಇಲಾಖೆ ವರದಿ ಪ್ರಕಾರ, ಬೆಂಗಳೂರು, ಮೈಸೂರು, ಕೊಡಗು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ಮಂಡ್ಯ ಮುಂತಾದೆಡೆ 115.5 ನಿಂದ 204.5 ಮಿಲಿಮೀಟರ್ವರೆಗೆ ಮಳೆಯಾಗಲಿದೆ. ಮೇ ಅಂತ್ಯಕ್ಕೆ ರಾಜ್ಯಾದ್ಯಂತ ಮುಂಗಾರು ಮಳೆ ಆಗಮಿಸುವ ನಿರೀಕ್ಷೆ ಇದೆ. ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಗುಡುಗು, ಮಿಂಚು, ಬಿರುಗಾಳಿ ಸಹಿತ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಾವೇರಿ, ದಾವಣಗೆರೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಸಂಜೆ ಮಳೆಯಾಗಿದೆ. ಇಂದು ಸಹ ಮಳೆಯಾಗುವ ಸಾಧ್ಯತೆ ಇದೆ.