ಬೆಂಗಳೂರು :- ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ ಆಗಲಿದ್ದು, ಮುಂದಿನ 4 ದಿನಗಳ ಮಳೆ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
RCB V/s CSK: ಅಕಸ್ಮಾತ್ ಮಳೆಯಿಂದ ಪಂದ್ಯದ ಓವರ್ ಕಡಿತವಾದ್ರೆ CSK ಮೇಲೆ RCB ಎಷ್ಟು ರನ್ ಮೇಲೆ ಗೆಲ್ಲಬೇಕು!?
ಮುಂದಿನ ನಾಲ್ಕು ದಿನಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ತಮಿಳುನಾಡು, ಕೇರಳ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ
ದಕ್ಷಿಣ ಕರ್ನಾಟಕದಲ್ಲಿ ಇಂದಿನಿಂದ ಮೇ 20 ರವರೆಗೆ ವಿಶೇಷವಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮೇ 20 ರಂದು ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆಗಳಲ್ಲಿ ಸಹ ಇದೇ ವಾತಾವರಣ ಇರಲಿದೆ.
ರಾತ್ರಿ 7:00 ರಿಂದ ರಾತ್ರಿ 10:30 ರ ನಡುವಿನ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. 10:15 PM ಮತ್ತು 12:00 AM ನಡುವೆ ಮಳೆಯ ತೀವ್ರತೆಯು ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದೆ.
ಮೇ 20ರ ವರೆಗೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲೆರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಲಾಪುರ, ತುಮಕೂರು, ಚಿತ್ರದುರ್ಗ ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಮೇ 20ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿರುಗಾಳಿ ಸಹಿತ ಮಳೆಯಾಗೋ ಸಾಧ್ಯತೆ ಇದೆ. ಬೆಂಗಳೂರಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಕರ್ನಾಟಕದ ಒಳನಾಡು ಭಾಗಗಳಲ್ಲಿ 1.5 ಕಿ.ಮೀ ಎತ್ತರದಲ್ಲಿ ಟ್ರರ್ಫ್ ಹಿನ್ನೆಲೆ ಮಳೆ ಬರುತ್ತಿದೆ.