ಬೆಂಗಳೂರು:- ಬಿಜೆಪಿ ಮುಖಂಡ ದೇವರಾಜೇಗೌಎ ಅವರ ಅವರು ಪೆನ್ಡ್ರೈವ್ ಬಗ್ಗೆ ಡಿಕೆ ಶಿವಕುಮಾರ್ ವಿರುದ್ಧ ಮತ್ತಷ್ಟು ಹೊಸ ಹೊಸ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇತ್ತ ಜೆಡಿಎಸ್ ಸಿಡಿದೆದ್ದಿದೆ.
ರಾಹುಲ್ ದ್ರಾವಿಡ್ ಬಳಿಕ ಟೀಮ್ ಇಂಡಿಯಾದ ಮುಂದಿನ ಹೆಡ್ ಕೋಚ್ ಗೌತಮ್ ಗಂಭೀರ್!?
ಪೆನ್ಡ್ರೈವ್ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ನನಗೆ 100 ಕೋಟಿ ಆಫರ್ ನೀಡಿದ್ದರು ಎಂದು ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್ ಟ್ವೀಟ್ ಮಾಡಿದ್ದು, ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದು ನಾಲ್ವರು ಸಚಿವರುಗಳ ಹೆಸರುಗಳನ್ನು ಬಹಿರಂಗಪಡಿಸಿದೆ.
ಎಸ್ಐಟಿ ವಶದಲ್ಲಿದ್ದುಕೊಂಡೇ ಮಾಧ್ಯಮಗಳ ಮುಂದೆ ಡಿಕೆ ಶಿವಕುಮಾರ್ ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಿದ ಬೆನ್ನಲ್ಲೇ ಈ ಬಗ್ಗೆ ಜೆಡಿಎಸ್ ಟ್ವೀಟ್ ಮಾಡಿದ್ದು, 1.ಡಿಸಿಎಂ ಡಿ.ಕೆ.ಶಿವಕುಮಾರ್ , 2.ಕೃಷಿ ಸಚಿವ ಚೆಲುವರಾಯಸ್ವಾಮಿ, 3.ಕಂದಾಯ ಸಚಿವ ಕೃಷ್ಣಭೈರೇಗೌಡ, 4. IT BT ಸಚಿವ ಪ್ರಿಯಾಂಕ್ ಖರ್ಗೆ ಪ್ಲಸ್ ಇನ್ನೂ ಒಬ್ಬ ಸಚಿವ ಹಾಗೇ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ. ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು CD ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ಎಂದು ಬರೆದುಕೊಂಡಿದೆ.
ಹೌದು..ಈ ಹಿಂದೆ ಪ್ರಕರಣ ಸಂಬಂಧ ವಕೀಲ ದೇವರಾಜೇಗೌಡ ಅವರು ಆರಂಭದಲ್ಲೇ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಅಲ್ಲದೇ ವಾಯ್ಸ್ ರೆಕಾರ್ಡ್ ಬಿಡುಗಡೆ ಮಾಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.