ಬೆಂಗಳೂರು: “ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ; ಉತ್ತರ ಪ್ರದೇಶದಲ್ಲಿ 40 ಸ್ಥಾನ, ದೇಶದಲ್ಲಿ 300 ಸ್ಥಾನ ಗೆಲ್ಲುತ್ತೇವೆ ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು.
ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿ, “ಬಿಜೆಪಿ ಭದ್ರಕೋಟೆ ಎನ್ನುವ ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ ” ಎಂದು ತಿಳಿಸಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ.
Monsoon: ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ಈ ತರಕಾರಿಗಳನ್ನು ತಿನ್ನಬೇಡಿ..!
ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ” ಎಂದರು.