ಬೆಂಗಳೂರು: ಅಂತಾರಾಷ್ಟ್ರೀಯ ಫುಟ್ಬಾಲ್ಗೆ ನಿವೃತ್ತಿ ಘೋಷಿಸಿದ ಭಾರತದ ದಿಗ್ಗಜ ಆಟಗಾರ ಸುನಿಲ್ ಚೆಟ್ರಿ, ನಿವೃತ್ತಿ ನಿರ್ಧಾರ ಕೈಗೊಳ್ಳುವ ಮುನ್ನ ವಿರಾಟ್ ಕೊಹ್ಲಿಯ ಜೊತೆ ಮಾತನಾಡಿ, ಅವರ ಸಲಹೆ ಕೇಳಿದ್ದೆ ಎಂದು ಹೇಳಿದ್ದಾರೆ. ಈ ಬಗ್ಗೆ ವರ್ಚುವಲ್ ಸಂದರ್ಶನದಲ್ಲಿ ಮಾತನಾಡಿದ ಚೆಟ್ರಿ, ‘ಕೊಹ್ಲಿ ನನ್ನ ಉತ್ತಮ ಸ್ನೇಹಿತ. ನನ್ನನ್ನು ಅವರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ.
Monsoon: ಯಾವುದೇ ಕಾರಣಕ್ಕೂ ಮಳೆಗಾಲದಲ್ಲಿ ಈ ತರಕಾರಿಗಳನ್ನು ತಿನ್ನಬೇಡಿ..!
ಹೀಗಾಗಿ ನಿವೃತ್ತಿ ಬಗ್ಗೆ ಅವರೊಂದಿಗೆ ಚರ್ಚಿಸಿದ್ದೆ’ ಎಂದಿದ್ದಾರೆ. ಇದಕ್ಕೂ ಮುನ್ನ ಆರ್ಸಿಬಿಯ ಸಂದರ್ಶನದಲ್ಲಿ ಕೊಹ್ಲಿ ಕೂಡಾ ‘ಸುನಿಲ್ ಚೆಟ್ರಿ ತಮ್ಮಲ್ಲಿ ನಿವೃತ್ತಿ ಬಗ್ಗೆ ಮಾತುಕತೆ ನಡೆಸಿದ್ದಾರೆ’ ಎಂದು ತಿಳಿಸಿದ್ದರು. ಭಾರತ ಪರ 150 ಪಂದ್ಯಗಳನ್ನಾಡಿರುವ ಚೆಟ್ರಿ, ಜೂ.6ರಂದು ಕೊನೆ ಬಾರಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಲಿದ್ದಾರೆ.