ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೊಸ್ತಿಲಿಗೆ ಅರಿಶಿಣ ಹಚ್ಚುವುದೇಕೆ!?… ಹಿಂದಿನ ಕಥೆ ಹೇಳುವುದೇನು ಗೊತ್ತಾ!?
ಮೇ 21ರವರೆಗೆ ವರುಣ ಅಬ್ಬರಿಸಲಿದ್ದಾನೆ. ಅಲ್ಲದೇ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆ ನಿರ್ಬಂಧಿಸಲಾಗಿದೆ
ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೇ 21 ರವರೆಗೆ ಭಾರೀ ಮತ್ತು ಅತಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಡಿಸೆಂಬರ್ 2023 ರಿಂದ ಈ ಏಪ್ರಿಲ್ ತಿಂಗಳವರೆಗೆ ಕರ್ನಾಟಕದಲ್ಲಿ ಮಳೆಯಾಗಿರಲಿಲ್ಲ. ಆದರೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರಿನ ಐಎಂಡಿ ವಿಜ್ಞಾನಿ ಮತ್ತು ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ.
ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಎಚ್ಚರಿಕೆ ನೀಡಲಾಗಿದೆ.