ಬೆಂಗಳೂರು:- ತಡರಾತ್ರಿ ರೇವ್ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ G.R.ಫಾರ್ಮ್ಹೌಸ್ನಲ್ಲಿ ಜರುಗಿದೆ.
ಸಿದ್ದು ಸರ್ಕಾರ ಪೂರೈಸಿದ್ದು ವರುಷ.. ಸಾಧಿಸಿದ್ದು ಶೂನ್ಯ.. ವಿಜಯೇಂದ್ರ!
ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಹಾಗೂ ಕೆಲ ತೆಲುಗು ನಟಿಯರು ಕೂಡ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಕಾನ್ ಕಾರ್ಡ್ ಮಾಲೀಕ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ G.R.ಫಾರ್ಮ್ಹೌಸ್ನಲ್ಲಿ ಹೈದ್ರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ ನಡೆಯುತ್ತಿದ್ದ ಈ ಪಾರ್ಟಿ ತಡರಾತ್ರಿ 2 ಗಂಟೆಯಾದ್ರೂ ಮುಗಿದಿರಲಿಲ್ಲ. ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿತ್ತು. ಹೀಗಾಗಿ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದು ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.
ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದು ತಿಳಿದುಬಂದಿದೆ