ವಿಜಯಪುರ:- ಹೆಸ್ಕಾಂ ವಿದ್ಯುತ್ ವಿತರಣಾ ಕೇಂದ್ರದಲ್ಲೇ ಎಣ್ಣೆ ಪಾರ್ಟಿ ನಡೆದಿದ್ದು, ಸ್ಥಳೀಯರು ಆಕ್ರೋಶ ಹೊರ ಹಾಕಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳ್ಳಿಯಲ್ಲಿ ಜರುಗಿದೆ.
ಕೊಟ್ಟ ಮಾತಿನಂತೆ ಗ್ಯಾರಂಟಿ ನೀಡಿ 1 ವರ್ಷ ಪೂರೈಸಿದ ಸಿದ್ದರಾಮಯ್ಯ ಸರ್ಕಾರ…!
ಹೆಸ್ಕಾಂ ಜೆಇ ಗೊಲ್ಲಾಳಪ್ಪ ಪಾಟೀಲ ಅವರು ತಮ್ಮ ಸ್ನೇಹಿತನ ಜೊತೆ ನಿನ್ನೆ ರಾತ್ರಿ ಮದ್ಯ ಸೇವನೆ ಮಾಡಿದ್ದಾರೆ. ಈ ಹಿಂದೆಯೂ ಇದೇ ರೀತಿ ಕಚೇರಿಯ ಆವರಣದಲ್ಲೇ ಮದ್ಯ ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ. ಹೆಸ್ಕಾಂ ಜೆಇ ಗೊಲ್ಲಾಳಪ್ಪ ಪಾಟೀಲ ಅವರ ನಡೆಯ ಬಗ್ಗೆ ಸ್ಥಳೀಯರು ಪ್ರಶ್ನೆ ಮಾಡಿದ್ದು ತಾನು ಏನೂ ತಪ್ಪು ಮಾಡಿಲ್ಲ ಎಂದು ಜೆಇ ಸಾಹೇಬ್ರು ವಾದ ಮಾಡಿದ್ದಾರೆ. ನಮ್ಮ ಕಚೇರಿ ಆವರಣದಲ್ಲಿ ಮದ್ಯ ಸೇವನೆಗೆ ಅವಕಾಶವಿದೆ ಎಂದಿದ್ದಾರೆ. ಇಂತ ಆಧಿಕಾರಿ ವಿರುದ್ದ ಮೇಲಾಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ.
ಅನಾರೋಗ್ಯದಿಂದ ಮೃತಪಟ್ಟ ದೇವರ ಹಸುವನ್ನು ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿರುವ ಅಪರೂಪದ ಘಟನೆ ಇಂಡಿ ತಾಲೂಕಿನ ಹೊರ್ತಿಯಲ್ಲಿ ನಡೆದಿದೆ. ಗ್ರಾಮದ ಆರಾಧ್ಯ ದೈವ ಶ್ರೀ ರೇವಣಸಿದ್ಧೇಶ್ವರ ದೇವರಿಗಾಗಿ ಕಳೆದ 15 ವರ್ಷಗಳ ಹಿಂದೆ ಹಸುವನ್ನು ಬಿಡಲಾಗಿತ್ತು. ಯಾವಾಗಲೂ ಗುಡಿಯ ಮುಂದೆಯೇ ಇರುತ್ತಿದ್ದ ಹಸುವಿಗೆ ನಿತ್ಯ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರು ಗೋಮಾತೆ ಎಂದು ಭಕ್ತಿಯಿಂದ ಪೂಜಿಸುತ್ತಿದ್ದರು. ಅನಾರೋಗ್ಯದಿಂದ ಮೃತಪಟ್ಟಿದ್ದರಿಂದ ಗ್ರಾಮಸ್ಥರೆಲ್ಲ ಸೇರಿ ಟ್ರ್ಯಾಕ್ಟರ್ ನಲ್ಲಿ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಗ್ರಾಮದ ಹಳೆಯ ರೇವಣಸಿದ್ಧೇಶ್ವರ ದೇವಸ್ಥಾನದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಗ್ರಾಮಸ್ಥರ ದೈವಿಭಕ್ತಿಗೆ ಶ್ಲಾಘನೆ ವ್ಯಕ್ತವಾಗಿದೆ.