ಬೆಂಗಳೂರು:- ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ನಡೆಸಿತ್ತು. ಇಂದು ರಂದು ಫಲಿತಾಂಶವನ್ನು ಪ್ರಕಟ ಮಾಡುವುದಾಗಿ ಹೇಳಿದೆ.
ನೀವು ಬೇಗ ಸಣ್ಣ ಆಗಬೇಕಾ!?..ಈ ತರಕಾರಿಗಳ ಜ್ಯೂಸ್ ಒಮ್ಮೆ ಕುಡಿಯಿರಿ.. ಪಕ್ಕಾ ರಿಸಲ್ಟ್!
ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ
ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು
karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್ಗೆ ಭೇಟಿ ನೀಡಿ.
ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ
ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್ನ್ಯೂಸ್ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ
ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ್ಯಾಂಕಿಂಗ್ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು