IPl ಸೀಸನ್ 17 ರಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ಗೆ ಎಂಟ್ರಿ ಕೊಡಲಿದೆ. ಇನ್ನು ಸೋತ ತಂಡ ಐಪಿಎಲ್ನಿಂದ ಹೊರಬೀಳುವುದಿಲ್ಲ. ಬದಲಾಗಿ ಎರಡನೇ ಕ್ವಾಲಿಫೈಯರ್ ಆಡಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್ಗೆ ಪ್ರವೇಶಿಸಲಿದೆ. ಇಲ್ಲಿ ಮೊದಲ ಕ್ವಾಲಿಫೈಯರ್ನಲ್ಲಿ ಸೋತ ತಂಡ ಮತ್ತು ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡಗಳು ಮುಖಾಮುಖಿಯಾಗಲಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಈವರೆಗೆ 26 ಪಂದ್ಯಗಳಲ್ಲಿ ಎದುರು ಬದುರಾಗಿದೆ. ಈ ವೇಳೆ ಕೆಕೆಆರ್ ತಂಡ 17 ಬಾರಿ ಜಯ ಸಾಧಿಸಿದರೆ, ಎಸ್ಆರ್ಹೆಚ್ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಇನ್ನು ಈ ಬಾರಿ ಉಭಯ ತಂಡಗಳು ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದು, ಈ ವೇಳೆ ಸನ್ರೈಸರ್ಸ್ ಹೈದರಾಬಾದ್ ವಿರೋಚಿತ ಪ್ರದರ್ಶನ ನೀಡಿ ಕೇವಲ 4 ರನ್ಗಳಿಂದ ಮಾತ್ರ ಸೋಲೊಪ್ಪಿಕೊಂಡಿತು. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.