ಬೆಂಗಳೂರು: ಕಳೆದೊಂದು ವರ್ಷದ ಈ ರಾಜ್ಯ ಸರ್ಕಾರ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ. ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ ಎಂದು ಅವರು ಕಿಡಿಕಾರಿದರು.
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು. ಈ ಸರ್ಕಾರ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಆಶಯ ಜನರದ್ದಾಗಿತ್ತು. ನುಡಿದಂತೆ ನಡೆಯುವ ಸರಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಹೊಗಳುಭಟರು, ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿಯಾಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.