ನವದೆಹಲಿ: ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ಮಂಗಳವಾರ ಸಭೆ ನಡೆಸಿದ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಕೊಡಗಿನ ತ್ರಿವೇಣಿ ಸಂಗಮದಲ್ಲಿ ಮಳೆ ಹೆಚ್ಚಾಗಿದ್ದು, ಕಾವೇರಿ (Cauvery River) ಒಡಲಿಗೆ ಜೀವಕಳೆ ಬಂದಿದೆ. ಪರಿಣಾಮ ಕೆಆರ್ಎಸ್ (KRS) ಒಳ ಹರಿವು ಹೆಚ್ಚಾಗಿದೆ. ಕಳೆದೊಂದು ವಾರದಲ್ಲಿ 1 ಟಿಎಂಸಿಯಷ್ಟು ನೀರು ಕನ್ನಂಬಾಡಿ ಕಟ್ಟೆ ಸೇರಿದೆ. ನೀರಿನ ಬವಣೆಯಿಂದ ಬೆಂದಿದ್ದ ರಾಜ್ಯಕ್ಕೆ ಮಳೆ ಕೊಂಚ ನಿರಾಳ ಮೂಡಿಸಿದೆ. ಈ ಹೊತ್ತಿನಲ್ಲೇ ತಮಿಳುನಾಡಿಗೆ ನೀರು ಹರಿಸುವಂತೆ ಪ್ರಾಧಿಕಾರ ಸೂಚಿಸಿದೆ.