ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಕ್ವಾಲಿಫೈಯರ್-1ರಲ್ಲಿ ಎದುರಿಸುತ್ತಿದೆ.
ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದು ಕ್ವಾಲಿಫೈಯರ್-1ರಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳಿಗೆ ಫೈನಲ್ ತಲುಪಲು ಎರಡು ಅವಕಾಶಗಳು ಸಿಕ್ಕರೂ, ಕೆಕೆಆರ್ ಮತ್ತು ಹೈದರಾಬಾದ್ ಈ ಪಂದ್ಯವನ್ನು ಗೆದ್ದು ಪ್ರಶಸ್ತಿ ಸುತ್ತಿಗೆ ಪ್ರವೇಶಿಸಲು ಪ್ರಯತ್ನಿಸುತ್ತವೆ.
ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 2012 ಮತ್ತು 2014ರಲ್ಲಿ ಪ್ರಶಸ್ತಿ ಜಯಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಡೇವಿಡ್ ವಾರ್ನರ್ ನಾಯಕತ್ವದಲ್ಲಿ 2016ರಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.