ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ನಾಳೆಯಿಂದ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಇಂದಿನಿಂದ 23ವರೆಗೆ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಧರ್ಮಸ್ಥಳ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 cm ಮಳೆ ಆಗಿದೆ. ಯಲ್ಲಾಪುರ, ಉತ್ತರ ಕನ್ನಡ ಜಿಲ್ಲೆಯಲ್ಲಿ 10 cm ಮಳೆ ಆಗಿದೆ. ದಾವಣಗೆರೆ ಜಿಲ್ಲೆಯಲ್ಲಿ 8 cm ಗದಗ ಜಿಲ್ಲೆಯಲ್ಲಿ 7 cm ಮಳೆ ಆಗಿದೆ. ಕರಾವಳಿ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಆಗಲಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಜಿಲ್ಲೆಗಳಿಗೆ ಯೆಲೋ ಅರ್ಲಟ್ ನೀಡಲಾಗಿದೆ
ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಡಿಸೆಂಬರ್ 2023 ರಿಂದ ಈ ಏಪ್ರಿಲ್ ತಿಂಗಳವರೆಗೆ ಕರ್ನಾಟಕದಲ್ಲಿ ಮಳೆಯಾಗಿರಲಿಲ್ಲ. ಮುಂದಿನ 2 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಅದಕ್ಕೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ