ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೂಲಿಕಟ್ಟಿ ಗ್ರಾಮದಲ್ಲಿ ಮಂಗಳವಾರ ನಡೆದಿದ್ದ ಭೀರೇಶ್ವರ ಮತ್ತು ಕರೆಮ್ಮ ದೇವಿ ಜಾತ್ರೆಯಲ್ಲಿ ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿಯನ್ನು ಇವರು ಸೇವಿಸಿದ್ದರು.
ಆದರೆ, ಪ್ರಸಾದ ಸೇವಿಸಿದ ಜನರಲ್ಲಿ ಬುಧವಾರ ಏಕಾಏಕಿ ವಾಂತಿ, ಭೇದಿ ಶುರುವಾಗಿದೆ. ಕೂಡಲೇ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಅಸ್ವಸ್ಥಗೊಂಡ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಹೂಲಿಕಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ. ಅಹಿತಕರ ಘಟನೆಗಳು ನಡೆಯದಂತೆ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯವನ್ನೂ ತಾಲೂಕು ವೈದ್ಯರು ತಪಾಸಣೆ ಮಾಡುತ್ತಿದ್ದಾರೆ.