ನಟ ರಿಷಬ್ ಶೆಟ್ಟಿ ಸದ್ಯ ಕಾಂತಾರ ಪಾರ್ಟ್ 1 ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಬಿಡುವು ಮಾಡಿಕೊಂಡು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಕ್ಷೇತ್ರಕ್ಕೆ ಪತ್ನಿ ಹಾಗೂ ಮಕ್ಕಳೊಂದಿಗೆ ಭೇಟಿ ನೀಡಿದ್ದಾರೆ.
‘ಕಾಂತಾರ’ ಪಾರ್ಟ್ 1ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದೆ. ಕೆಲಸಕ್ಕೆ ಕೊಂಚ ಬ್ರೇಕ್ ಕೊಟ್ಟು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ರಿಷಬ್ ಭೇಟಿ ನೀಡಿದ್ದಾರೆ. ತುಂಗಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ದೇಗುಲವಾಗಿರುವ ಹರಿಹರಪುರದ ಶಾರದ ಲಕ್ಷ್ಮಿ ನರಸಿಂಹಸ್ವಾಮಿಯ ದರ್ಶನ ಪಡೆದಿದ್ದಾರೆ. ಬಳಿಕ ಶ್ರೀ ಸ್ವಯಂ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ, ರಿಷಬ್ ಶೆಟ್ಟಿರನ್ನು ನೋಡುತ್ತಿದ್ದಂತೆ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ.
ಇತ್ತೀಚೆಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಿಷಬ್, ಜನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ರೆ ಒಳ್ಳೆಯದು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ‘ಕಾಂತಾರ’ ಪ್ರೀಕ್ವೆಲ್ ಚಿತ್ರೀಕರಣ ಆರಂಭವಾಗಿದೆ. ಸಿನಿಮಾದ ಕೆಲಸ ಬಹಳ ಚೆನ್ನಾಗಿ ನಡೆಯುತ್ತಿದೆ ಎಂದು ರಿಷಬ್ ಶೆಟ್ಟಿ ತಿಳಿಸಿದ್ದರು.