ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ. ಹೊಸದಾಗಿ ಬಿಪಿಎಲ್ / BPL ಮತ್ತು ಎಪಿಎಲ್ / APL ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಅಗತ್ಯವಾಗಿದೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ..
ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್… ಬೆಳ್ಳಿ ಬೆಲೆ ಗ್ರಾಮ್ಗೆ 3.30 ರೂನಷ್ಟು ಕುಸಿತ; ಚಿನ್ನವೂ ಇಳಿಕೆ!
ಕರ್ನಾಟಕ ಸರ್ಕಾರವು ಜೂನ್ ತಿಂಗಳ ಪ್ರಾರಂಭದಲ್ಲಿ ಹೊಸದಾಗಿ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶ ನೀಡುತ್ತಿದೆ. ಈ ಕೆಳಗೆ ತಿಳಿಸಿಕೊಡುವ ಅಗತ್ಯ ದಾಖಲೆಗಳನ್ನು ಈ ಕೂಡಲೇ ರೆಡಿ ಇಟ್ಟುಕೊಳ್ಳಿ.
ಮೊದಲನೇದಾಗಿ ಕುಟುಂಬ ಸದಸ್ಯರಲ್ಲಿ ಯಾರಾದರೂ ಒಬ್ಬರ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ ಕಡ್ಡಾಯ. ಮನೆಯ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯ. ಎಲ್ಲರ ಆಧಾರ್ ಕಾರ್ಡ್ ಮೊಬೈಲ್ ನಂಬರ್ ಜೊತೆ ಲಿಂಕ್ ಇರಬೇಕು . ಆರು ವರ್ಷದ ಒಳಗಿನ ಮಗುವನ್ನು ಸೇರಿಸಲು ಮಗುವಿನ ಜನನ ಪ್ರಮಾಣ ಪತ್ರ ಕಡ್ಡಾಯ. ಮತ್ತು ಇತ್ತೀಚಿಗೆ ತೆಗೆದ ಭಾವಚಿತ್ರ.
ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ಪ್ರಕಟವಾದ ಬಳಿಕ ನಿಮ್ಮ ಹತ್ತಿರದ ಯಾವುದೇ ಸಿಎಸ್ಸಿ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಮೇಲೆ ತಿಳಿಸಲಾದ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ.