ಬೆಂಗಳೂರು: ಪೆಟ್ರೋಲ್ ಹಾಗೂ ಡಿಸೇಲ್ ದರಗಳು ಪ್ರತಿ ತಿಂಗಳ 1 ರಿಂದ 16ರ ನಡುವೆ ಬದಲಾಗುತ್ತಿತ್ತು. ಆದಾಗ್ಯೂ ಜೂನ್ 2017ರ ನಂತರ ಜಾರಿಗೆ ಬಂದ ಹೊಸ ಯೋಜನೆಯಂತೆ ಪ್ರತಿದಿನ ಬೆಳಗ್ಗೆ ಆರು ಗಂಟೆಗೆ ಪೆಟ್ರೋಲ್ ಡಿಸೇಲ್ ದರಗಳಲ್ಲಿ ಬದಲಾವಣೆಯಾಗುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಹೊಸ ಬೆಲೆಗಳು
ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ರೂ 94.72 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್ಗೆ ರೂ 87.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.15 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.98 ರೂ., ಡೀಸೆಲ್ ಬೆಲೆ ಲೀಟರ್ಗೆ 92.56 ರೂ. ಬೆಂಗಳೂರಿನಲ್ಲಿ 99.84 ರೂ., ಡೀಸೆಲ್ 85.93 ರೂ. ಇದೆ.
ಲೋಕಸಭೆ ಚುನಾವಣೆ 2024 ರ ಮೊದಲು, ಮಾರ್ಚ್ 14, 2024 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು 2 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು.ಇತ್ತೀಚೆಗೆ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 90 ಡಾಲರ್ ದಾಟಿತ್ತು. ಆದರೆ, ಈಗ ಇಳಿಕೆ ಕಾಣುತ್ತಿದೆ. ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 83 ಡಾಲರ್ಗಿಂತ ಹೆಚ್ಚುತ್ತಿದೆ.