ದಕ್ಷಿಣ ಆಫ್ರಿಕಾದ ಮಾಜಿ ಅನುಭವಿ ಆಟಗಾರ ಎಬಿ ಡಿವಿಲಿಯರ್ಸ್ ಸ್ವತಃ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಲು ಸ್ವತಃ ಆಸಕ್ತಿ ತೊರಿದ್ದಾರೆ ಎನ್ನಲಾಗಿದೆ.
IPL 2024: RCBಯ ಮುಂದಿನ ಕ್ಯಾಪ್ಟನ್ ಯಾರು ಗೊತ್ತಾ!?.. ಸ್ಪೋಟಕ ಯುವ ಬ್ಯಾಟರ್ ಗೆ ಮಣೆ..!
ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲು ಹಲವು ಅನುಭವಿ ಆಟಗಾರರಿಗೆ ಆಫರ್ ಬಂದಿದ್ದು, ಹಲವು ಆಟಗಾರರು ಅದಕ್ಕೆ ನಿರಾಕರಿಸಿದ್ದಾರೆ. ಮೇ 27ರವರೆಗೆ ಮುಖ್ಯ ಕೋಚ್ ಆಗಲು ಅರ್ಜಿ ಸಲ್ಲಿಸಬಹುದು ಎಂದು ಬಿಸಿಸಿಐ ಪ್ರಕಟಿಸಿದೆ. ಏತನ್ಮಧ್ಯೆ, ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ, ಆರ್ಸಿಬಿಯ ಆಪತ್ಭಾಂಧವ ಎಂದೇ ಖ್ಯಾತರಾಗಿದ್ದ ಎಬಿ ಡಿವಿಲಿಯರ್ಸ್, ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗಬಹುದು ಎಂಬ ವದಂತಿ ಎದ್ದಿದೆ.
ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಅವರಿಗೆ ಮುಖ್ಯ ಕೋಚ್ ಹುದ್ದೆಗೆ ಆಫರ್ ನೀಡಲಾಗಿತ್ತು. ಆದರೆ ಪಾಂಟಿಂಗ್ ಈ ಮನವಿಯನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಇದಲ್ಲದೇ ರಾಹುಲ್ ದ್ರಾವಿಡ್ ಕೂಡ ತಮ್ಮ ಅಧಿಕಾರಾವಧಿಯನ್ನು ವಿಸ್ತರಿಸಲು ನಿರಾಕರಿಸಿದ್ದರು. ಈ ಮಧ್ಯೆ, ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್, ಮುಂದಿನ ಮುಖ್ಯ ಕೋಚ್ ಆಗಬಹುದು ಎಂಬ ಕೂಗು ಜೋರಾಗಿ ಕೇಳಿಬರುತ್ತಿದೆ. ಆದರೆ ಈ ಮಧ್ಯೆ, ದಕ್ಷಿಣ ಆಫ್ರಿಕಾದ ಮಾಜಿ ಅನುಭವಿ ಆಟಗಾರ ಎಬಿ ಡಿವಿಲಿಯರ್ಸ್ ಸ್ವತಃ ಮುಖ್ಯ ಕೋಚ್ ಆಗಲು ಸ್ವತಃ ಆಸಕ್ತಿ ತೊರಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡುವ ವೇಳೆ ಎಬಿ ಡಿವಿಲಿಯರ್ಸ್ ಮುಖ್ಯ ಕೋಚ್ ಹುದ್ದೆಯ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ವೇಳೆ ಭವಿಷ್ಯದಲ್ಲಿ ಭಾರತ ತಂಡದ ಮುಖ್ಯ ಕೋಚ್ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದೇ ಎಂಬ ಪ್ರಶ್ನೆ ಕೇಳಿದಾಗ. ಈ ಪ್ರಶ್ನೆಗೆ ಉತ್ತರಿಸಿದ ಡಿವಿಲಿಯರ್ಸ್, ‘ನಾನು ಈ ಜವಾಬ್ದಾರಿಯನ್ನು ನಿಭಾಯಿಸುತ್ತೇನೋ ಇಲ್ಲವೋ ನನಗೆ ತಿಳಿದಿಲ್ಲ. ಆದರೆ ನಾನು ಈ ಜವಾಬ್ದಾರಿಯನ್ನು ಹೆಚ್ಚು ಆನಂದಿಸುತ್ತೇನೆ ಎಂದು ಹೇಳಿದ್ದಾರೆ.