ಟಿ20 ವಿಶ್ವಕಪ್ಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಅಮೇರಿಕಕ್ಕೆ ಹಾರಿದೆ. ಮಿನಿ ವಿಶ್ವ ಸಮರಕ್ಕೆ ಟೀಂ ಇಂಡಿಯಾದ ಕೆಲವು ಆಟಗಾರರು ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನೇಕ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
Prahlad Joshi: ಪ್ರಜ್ವಲ್ ದೇಶ ಬಿಡುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ – ಪ್ರಹ್ಲಾದ್ ಜೋಶಿ
ತಂಡದ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಸೇರಿದಂತೆ ಹಲವು ಆಟಗಾರರು ವಿಶ್ವಕಪ್ಗೆ ತೆರಳುತ್ತಿರುವುದನ್ನು ಈ ವಿಡಿಯೋದಲ್ಲಿ ನಾವು ಕಾಣಬಹುದಾಗಿದೆ. ಆಟಗಾರರಲ್ಲದೆ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿಯ ಸದಸ್ಯರು ಸಹ ಈ ಆಟಗಾರರೊಂದಿಗೆ ಪ್ರಯಾಣ ಬೆಳೆಸಿದ್ದಾರೆ.
ಐಪಿಎಲ್ 2024 ರ ಅಂತಿಮ ಪಂದ್ಯ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಎರಡೂ ತಂಡಗಳಿಂದ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ರಿಂಕು ಸಿಂಗ್. ಆದರೆ, ಅವರನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಗಿಲ್ಲ. ಬದಲಿಗೆ ಮೀಸಲು ಆಟಗಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಐಪಿಎಲ್ 2024 ರ ಫೈನಲ್ ನಂತರ, ಅವರು ವಿಶ್ವಕಪ್ಗಾಗಿ ಅಮೆರಿಕಕ್ಕೆ ತೆರಳಲಿದ್ದಾರೆ. ಮೇ 27-28 ರಂದು ಟೀಂ ಇಂಡಿಯಾದ ಎರಡನೇ ಬ್ಯಾಚ್ ಅಮೆರಿಕಕ್ಕೆ ತೆರಳಬಹುದು ಎಂದು ಹೇಳಲಾಗುತ್ತಿದೆ