ದೆಹಲಿ:- ದೆಹಲಿಯ ಬೇಬಿ ಕೇರ್ ಸೆಂಟರ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ನವಜಾತ ಶಿಶುಗಳು ಸುಟ್ಟು ಕರಕಲಾದ ಘಟನೆ ಜರುಗಿದೆ.
ಸರ್ಕಾರಕ್ಕೆ ಭರ್ಜರಿ ಆದಾಯ ತಂದುಕೊಟ್ಟ ಮದ್ಯಪ್ರಿಯರು.. ಶೇ15 ರಷ್ಟು ಅಧಿಕ ಲಾಭ!
12 ಶಿಶುಗಳನ್ನು ರಕ್ಷಿಸಲಾಗಿದೆ, ಅದರಲ್ಲಿ 6 ಶಿಶುಗಳು ಸಾವನ್ನಪ್ಪಿವೆ. ಅದೇ ಸಮಯದಲ್ಲಿ, 5 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ (ಮೇ 25) ರಾತ್ರಿ 11.32 ಕ್ಕೆ ಪೂರ್ವ ದೆಹಲಿಯ ವಿವೇಕ್ ವಿಹಾರ್ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 9 ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಸ್ವತಃ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ. 12 ನವಜಾತ ಶಿಶುಗಳನ್ನು ಕಟ್ಟಡದಿಂದ ಹೊರತೆಗೆಯಲಾಯಿತು, ಆದರೆ ಚಿಕಿತ್ಸೆ ವೇಳೆ 6 ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಏನು ಎಂಬ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ಎಲ್ಲಾ ಆಯಾಮದಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.