ಗದಗ:- ಬೈಕ್ ಹಾಗೂ ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು ರೈತರಿಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಜರುಗಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಈ ಭೀಕರವಾದ ಅಪಘಾತ ಸಂಭವಿಸಿದ್ದು ಹಳ್ಳಿಗುಡಿ ಗ್ರಾಮದ ಪರಸಪ್ಪ ಜೋಗಿನ (53) ಹಾಗೂ ಪೇಠಾಲೂರು ಗ್ರಾಮದ ಮಾರುತಿ ಹ್ಯಾಟಿ (44) ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ.
ಮುಂಡರಗಿ ತಾಲೂಕಿನ ಡಂಬಳ ಕೃಷಿ ಕೇಂದ್ರದಿಂದ ರೈತರು ಬೈಕಿನಲ್ಲಿ ಬೀಜ ಹಾಗೂ ಗೊಬ್ಬರವನ್ನು ತೆಗೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಹಳ್ಳಿಗುಡಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯ ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.