ತುಮಕೂರು:- ಪ್ರಜ್ವಲ್ ರೇವಣ್ಣ ವಿಡಿಯೋ ಹೇಳಿಕೆ ಬಿಡುಗಡೆ ವಿಚಾರವಾಗಿ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ
ನಿಮಗೆ ಥೈರಾಯ್ಡ್ ಸಮಸ್ಯೆ ಇದ್ಯಾ!?.. ಹಾಗಿದ್ರೆ ಈ ಆಹಾರ ಸೇವಿಸಲೇಬೇಡಿ!
ಈ ಸಂಬಂಧ ಮಾತನಾಡಿದ ಅವರು,ಮೇ 31ರಂದು ಬೆಳಗ್ಗೆ 10ಕ್ಕೆ ಎಸ್ಐಟಿ ತನಿಖೆಗೆ ಸಹಕರಿಸುತ್ತೇನೆಂದು ಹೇಳಿದ್ದಾರೆ, ಇದನ್ನು ಸ್ವಾಗತಿಸುವೆ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಇಡೀ ಜಗತ್ತೇ ಮಾತನಾಡುವ ವೇಳೆ ವಾಪಸ್ ಕರೆತರಲು ಪ್ರಯತ್ನಿಸಿದ್ದೆವು.
ಪ್ರಧಾನಿಗೆ ಸಿಎಂ 2 ಸಲ ಪತ್ರ ಬರೆದಿದ್ದರು, ಸಿಬಿಐಗೆ ಮನವಿ ಮಾಡಿದ್ದೆವು. ಇಂಟರ್ಪೋಲ್ಗೂ ಮನವಿ ಮಾಡಿದ್ದು, ಬ್ಲೂಕಾರ್ನರ್ ನೋಟಿಸ್ ಸಹ ನೀಡಿದ್ದರು. ಪಾಸ್ಪೋರ್ಟ್ ರದ್ದು ಮಾಡಿ ಅಂತಾ ಕೇಂದ್ರಕ್ಕೂ ಮನವಿ ಮಾಡಿದ್ದೆವು. ಪಾಸ್ಪೋರ್ಟ್ ರದ್ದು ಪ್ರಕ್ರಿಯೆ ಆರಂಭಿಸಿದ್ದೇವೆ ಅಂತಾ ಕೇಂದ್ರ ಹೇಳಿತ್ತು. ಈ ಮಧ್ಯೆ ಪ್ರಜ್ವಲ್ ಬರುತ್ತೇವೆ ಅಂತಾ ಹೇಳಿದ್ದನ್ನು ಸ್ವಾಗತ ಮಾಡುತ್ತೇನೆ. ತಮ್ಮ ಬಳಿಯಿರುವ ಸಾಕ್ಷ್ಯ, ಮಾಹಿತಿ ಆಧರಿಸಿ SIT ತನಿಖೆ ಮುಂದುವರಿಸುತ್ತೆ ಎಂದರು
ಪ್ರಜ್ವಲ್ ರೇವಣ್ಣ ನನ್ನದೇನು ತಪ್ಪಿಲ್ಲ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಎಲ್ಲರು ಹಂಗೆ ಹೇಳ್ತಾರೆ, ನಮ್ಮದು ತಪ್ಪಿಲ್ಲ ಅಂತ. ತಪ್ಪಿಲ್ಲ ಅಂದರೆ ಮಾಡಿದೋರು ಯಾರು ಎಂಬ ಪ್ರಶ್ನೆ ಉದ್ಭವಿಸುತ್ತೆ. ಎಸ್ಐಟಿ ಅವರು ಎಲ್ಲಾ ಮಾಹಿತಿ ಕಲೆಹಾಕಿ ಅದರ ಆಧಾರದ ಮೇಲೆ ಯಾರದ್ದು ತಪ್ಪು, ಯಾರದ್ದು ತಪ್ಪಿಲ್ಲ ಅಂತ ಹೇಳ್ತಾರೆ. ಒಂದು ವೇಳೆ 31 ಕ್ಕೂ ಬಂದಿಲ್ಲ ಅಂದರೆ ಮುಂದೆ ಏನಾಗುತ್ತೆ ನೋಡೋಣ. ಇನ್ನು ಮೂರು ನಾಲ್ಕು ದಿನ ಇರೋದು ಅಷ್ಟೇ ಎಂದು ಹೇಳಿದ್ದಾರೆ.