ಬೆಂಗಳೂರು: ಕೋವಿಡ್ 19 ಸಂದರ್ಭದಲ್ಲಿ ನಡೆದಿರುವ ಅಕ್ರಮಗಳ ಆರೋಪದ ತನಿಖೆಗೆ ವಿಚಾರಣಾ ಆಯೋಗದ ಅವಧಿ ಎರಡನೇ ಬಾರಿಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಕೋವಿಡ್ 19 ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಔಷಧಿ ಖರೀದಿ, ಆಮ್ಲಜನಕ ನಿರ್ವಹಣೆ ಹಾಗೂ ಕೊರತೆಯಿಂದ ಉಂಟಾದ ಸಾವು ನೋವು ವಿಚಾರವಾಗಿ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿತ್ತು.
2021 ರ ಜುಲೈ ಹಾಗೂ ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿರುವ ವರದಿಯಲ್ಲಿನ ಗಂಭೀರ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಲಾಗಿತ್ತು. ಅಲ್ಲದೆ 3 ತಿಂಗಳ ಒಳಗಾಗಿ ವರದಿ ನೀಡುವಂತೆಯೂ ನಿಗದಿಪಡಿಸಲಾಗಿತ್ತು. ಆದರೆ ಈ ಅವಧಿಯಮ್ಮಿ ನವೆಂಬರ್ 22, 2023 ರ ಅಧಿಸೂಚನೆಯಲ್ಲಿ ಮೇ 24, 2024 ವರೆಗೆ ವಿಸ್ತರಣೆ ಮಾಡಲಾಗಿತ್ತು. ಆದರೆ ಈ ತನಿಖೆಗೆ ಮತ್ತಷ್ಟು ಕಾಲಾವಧಿಯನ್ನು ನ್ಯಾಯಾಧೀಶರು ಕೋರಿದ ಹಿನ್ನಲೆಯಲ್ಲಿ ಇದೀಗ ಮತ್ತೊಮ್ಮೆ ವಿಸ್ತರಣೆ ಮಾಡಲಾಗಿದೆ.
ವಾಟ್ಸಾಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ
ಇದೀಗ ರಾಜ್ಯ ಸರ್ಕಾರ ಹೊಸತಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ವಿಚಾರಣಾ ಆಯೋಗದ ಅವಧಿಯನ್ನು ಆಗಸ್ಟ್ 21 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ 19 ನಿರ್ವಹಣೆ ಸಂದರ್ಭದಲ್ಲಿ ವ್ಯಾಪಕ ಅಕ್ರಮಗಳನ್ನು ಎಸಗಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಪಿಪಿಪಿ ಕಿಟ್, ಮಾಸ್ಕ್ ಹಾಗೂ ಇತರ ಔಷಧಿಗಳ ಖರೀದಿಯಲ್ಲಿಅಕ್ರಮ ನಡೆಸಲಾಗಿದೆ ಎಂದು ಆರೋಪ ಮಾಡಲಾಗಿತ್ತು.
ಅಂದಿನ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ವಿರುದ್ಧವೂ ಈ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತನಿಖೆಗೆ ಆದೇಶ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದರು. ಅದರಂತೆ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ಅಕ್ರಮದ ಆರೋಪದ ಬಗ್ಗೆ ತನಿಖೆಗೆ ನೀಡಿದೆ. ಆದರೆ ಸರ್ಕಾರದ ಕ್ರಮ ಪರ ಹಾಗೂ ವಿರುದ್ಧ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು.