ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅಂತ್ಯವಾಗಲಿದೆ. ಸಂಸದ ಸ್ಥಾನ ಅಂತ್ಯವಾದರೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಕ್ಯಾನ್ಸಲ್ ಆಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ತನಿಖೆಗಾಗಿ ಎಸ್ಐಟಿ ಎಲ್ಲ ಪ್ರಯತ್ನ ಮಾಡುತ್ತಿದೆ. ವಾರೆಂಟ್ ಮೂಲಕ ಕೇಂದ್ರ ವಿದೇಶಾಂಗ ಇಲಾಖೆಗೆ ತಿಳಿಸಿದ್ದೇವೆ.
ವಾಟ್ಸಾಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ
ಬ್ಲೂ ಕಾರ್ನರ್ ನೋಟಿಸ್ ಕೊಟ್ಟಿದ್ದೂ ಗೊತ್ತಿದೆ. ಆದರೀಗ ಅವರ ಪಾಸ್ಪೋರ್ಟ್ ರದ್ದಾಗುವ ಹಿನ್ನೆಲೆಯಲ್ಲಿ ಎಲ್ಲವನ್ನೂ ತಿಳಿದು ವಾಪಸ್ ಬರುತ್ತೇನೆ ಅಂತಾ ವೀಡಿಯೋ ಮೂಲಕ ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಷಡ್ಯಂತ್ರ ಮಾಡಿದೆ ಎಂಬ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಅದೆನ್ನೆಲ್ಲಾ ನೋಡೋಣ. ಎಸ್ಐಟಿ ಅವರು ಗಮನಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.