ಬೆಂಗಳೂರಿನ ರೇವ್ ಪಾರ್ಟಿ ಪ್ರಕರಣದ ವಿಚಾರಣೆಗೆ ತೆಲುಗು ಸಿನಿಮಾ ನಟಿ ಹೇಮಾ ಸೇರಿದಂತೆ ಇತರರು ಗೈರಾಗಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನಟಿ ಹೇಮಾ ಸೇರಿ ಎಂಟು ಮಂದಿಗೆ ಸಿಸಿಬಿ ನೋಟಿಸ್ ನೀಡಿತ್ತು. ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೋರಿ ಸಿಸಿಬಿ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ನಟಿ ಹೇಮಾ ಆ್ಯಂಡ್ ಟೀಮ್ಗೆ ಸಿಸಿಬಿ ಅಧಿಕಾರಿಗಳು ಎರಡನೇ ನೋಟಿಸ್ ನೀಡಿದ್ದಾರೆ.
ಪಾರ್ಟಿ ಆಯೋಜನೆ ಮಾಡಿದ್ದ ವಾಸು, ಅರುಣ್, ಸಿದ್ದಿಕಿ, ನಾಗಬಾಬು ಸೇರಿ ಐವರಿಗೆ ಮೇ 27ರಂದು ಹತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲು ಕೋರ್ಟ್ ಆದೇಶಿಸಿದೆ. ಇಂದಿನಿಂದ (ಮೇ 28) ಐವರು ಆರೋಪಿಗಳಿಗೆ ರೇವ್ ಪಾರ್ಟಿ ಆಯೋಜನೆ ಹಾಗೂ ಡ್ರಗ್ಸ್ ಸಪ್ಲೈ ಬಗ್ಗೆ ವಿಚಾರಣೆ ಮಾಡಲಿದ್ದಾರೆ ಸಿಸಿಬಿ ಅಧಿಕಾರಿಗಳು.
ವಾಟ್ಸಾಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ
ಅಂದಹಾಗೆ, ರೇವ್ ಪಾರ್ಟಿ ವಿಚಾರ ಬಯಲಾಗುತ್ತಿದ್ದಂತೆಯೇ ನಟಿ ಹೇಮಾ ಅವರು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದರು. ವೀಡಿಯೋದಲ್ಲಿ ನಾನು ಹೈದರಾಬಾದ್ನಲ್ಲಿ ಇರುವುದಾಗಿ ಹೈಡ್ರಾಮಾ ಮಾಡಿದ್ದರು. ಇತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಹೇಮಾ ಅವರು ಡ್ರಗ್ಸ್ ಪಾರ್ಟಿಯಲ್ಲಿ ಇದ್ದರು ಎಂಬುದಾಗಿ ಸ್ಪಷ್ಟನೆ ನೀಡಿದ್ದರು.