ಬೆಂಗಳೂರು:- ಹುಡುಗಿಯರ ಪೋಟೊಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ ಜೀವನ್ ಕುಮಾರ್ ಬಂಧಿತ ಆರೋಪಿ ಎನ್ನಲಾಗಿದೆ.
ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಯುವಕ ಹಾಕುತ್ತಿದ್ದ. ಇದಕ್ಕಾಗಿಯೇ ನಕಲಿ ಖಾತೆಗಳನ್ನು ಸೃಷ್ಟಿ ಮಾಡಿಕೊಂಡಿದ್ದ. ಹೀಗೆಯೇ ಅಪ್ರಾಪ್ತೆಯ ಫೋಟೋಗಳನ್ನು ಮಾರ್ಫ್ ಮಾಡಿ ಇನ್ಸ್ಸ್ಟಾಗ್ರಾಂನಲ್ಲಿ ಹರಿಬಿಟ್ಟಿದ್ದ. ಈ ಹಿನ್ನೆಲೆ ಬಾಲಕಿಯ ತಂದೆ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ರೂ. ಸದ್ಯ ತನಿಖೆ ನಡೆಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ,
ಆರೋಪಿಗೆ ಸಾಥ್ ಕೊಟ್ಟಿದ್ದ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಾಲ ನ್ಯಾಯ ಮಂಡಳಿ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿರುವ 3 ಮೊಬೈಲ್ ಫೋನ್ಗಳು ಸೀಜ್ ಮಾಡಿದ್ದಾರೆ.