ಇಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಈ ದಿನ ಅಂಬರೀಶ್ ಅವರ ಲಕ್ಷಾಂತರ ಅಭಿಮಾನಿಗಳಿಗೆ ಸಂಭ್ರಮದ ದಿನ. ಈ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಬರೀಶ್ ಅವರ ವಿಶೇಷ ಪೋಸ್ಟರ್ ರಿಲೀಸ್ ಮಾಡಿ ಶುಭಕೋರಿದ್ದಾರೆ. ಎಕ್ಸ್ ಖಾತೆಯಲ್ಲಿ ವಿಶೇಷವಾಗಿ ಅಂಬರೀಶ್ ಅವರಿಗೆ ದರ್ಶನ್ ವಿಶ್ ಮಾಡಿದ್ದಾರೆ.
ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿರವರ ಹುಟ್ಟುಹಬ್ಬದ ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದು ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಅಂಬರೀಶ್ ಹುಟ್ಟುಹಬ್ಬಕ್ಕೆ ದರ್ಶನ್ ವಿಶ್ ಮಾಡಿದ್ದಾರೆ.
ಅಂಬರೀಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಸ್ಮಾರಕಕ್ಕೆ ಅಭಿಮಾನಿಗಳು ಭೇಟಿ ನೀಡಲಿದ್ದಾರೆ. ಅಂಬಿ ಸ್ಮಾರಕಕ್ಕೆ ವಿಶೇಷ ಪೂಜೆ ಸಲ್ಲಿಸಲಿದ್ದು ವಿವಿಧ ಕಾರ್ಯಕ್ರಮಗಳನ್ನು ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ. ಅಲ್ಲದೆ ನಟಿ ಸುಮಲತಾ ಕೂಡ ಸ್ಮಾರಕಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.