ಕೋಲಾರ:- ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿಯೇ ಕೋಲಾರ ತಾಲೂಕಿನ ಕಾಲೇಜುಗಳಿಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ, ಜನಪರ ಆಡಳಿತ ಹಾಗೂ ಸರ್ವರಿಗೂ ಅನುಕೂಲವಾಗುವಂತ ಯೋಜನೆಗಳು ಜಾರಿಯಾಗಲು ಮೇಲ್ಮನವಿಯಲ್ಲಿ ಬಹುಮತ ಅನಿವಾರ್ಯವಿದ್ದು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ಅವ್ರು ಹೇಳಿದ್ರು.
ಇಂದು ನಗರದಲ್ಲಿ ವಿವಿಧ ಶಾಲಾ ಕಾಲೇಜುಗಳಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಪರವಾಗಿ ಚುನಾವಣಾ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ್ರು. ದೇಶವು ಅಭಿವೃದ್ಧಿಯಾಗಲು ಶಿಕ್ಷಣ, ಆರೋಗ್ಯ ಮತ್ತು ರೈತರಿಗೆ ಮೊದಲ ಅಧ್ಯತೆ ನೀಡಬೇಕಾಗಿದೆ ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಅಭಿವೃದ್ಧಿಯ ದೃಷ್ಟಿಯಿಂದ ಬಹಳಷ್ಟು ಕೊಡುಗೆಗಳನ್ನು ನೀಡಿದೆ. ಸಿದ್ದರಾಮಯ್ಯನವರು ಯಾವುದೇ ಧರ್ಮ, ಜಾತಿಗೆ ಸೀಮಿತವಾಗದೆ ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ರೂಪಿಸಿದ್ದಾರೆ.
ಹೀಗಾಗಿ ಡಿ.ಟಿ ಶ್ರೀನಿವಾಸ್ ಅವರನ್ನು ಗೆಲ್ಲಿಸಿ ಸಿದ್ದರಾಮಯ್ಯ ಡಿ.ಕೆ ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದರು.
ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು 7 ನೇ ವೇತನ ಆಯೋಗದ ಸಿದ್ದತೆಯೂ ಕಾಂಗ್ರೆಸ್ ಸರ್ಕಾರದ ಚಿಂತನೆಯಾಗಿದೆ. ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ಕ್ಷೇತ್ರವು ಅಭಿವೃದ್ದಿಯಾಗಬೇಕಿದೆ. ಶೈಕ್ಷಣಿಕ ಕಾರ್ಯಕ್ರಮಗಳ ಜೊತೆಗೆ ಜನಪರವಾದ ಕಾರ್ಯಕ್ರಮಗಳನ್ನು ರೂಪಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಪಕ್ಷದ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಬೆಂಬಲಿಸಿ ಅವರನ್ನು ವಿಧಾನ ಪರಿಷತ್ತಿಗೆ ಕಳಸಿಕೊಡಿ ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಅಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಸಮಸ್ಯೆಗಳನ್ನು ಹೇಗೆ ಪರಿಹಾರ ಮಾಡಬೇಕು ಎಂಬುದು ಅವರಿಗೆ ತಿಳಿದಿದೆ ಇಂತಹವರು ವಿಧಾನಪರಿಷತ್ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರನ್ನು ಜಿಲ್ಲೆಗೆ ಕರೆತಂದು ಶೈಕ್ಷಣಿಕ ಅಭಿವೃದ್ಧಿಗೆ ಗಮನ ಹರಿಸಲಾಗುತ್ತದೆ ಎಂದರು.
ಕ್ಷೇತ್ರದಲ್ಲಿ ಸುಮಾರು 18 ವರ್ಷಗಳಿಂದ ಆಯ್ಕೆಯಾಗಿದ್ದವರು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಿಲ್ಲ ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಶಿಕ್ಷಣವನ್ನು ಅದೋಗತಿಗೆ ತಂದು ಕೂರಿಸಿದ್ದಾರೆ.ಆದರೆ ಕಾಂಗ್ರೆಸ್ ನೇತೃತ್ವದ ಸರಕಾರವು ಬೌಧ್ಧಿಕವಾಗಿ ಮಕ್ಕಳು ಬೆಳೆಯಬೇಕು ಎಂಬ ಆಶಯದೊಂದಿಗೆ ಖಾಲಿ ಶಿಕ್ಷಕರ ಹುದ್ದೆಗಳನ್ನು ತುಂಬಲು ಮುಂದಾಗಿದೆ.ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ ಸರಕಾರದ ಪರವಾಗಿ ಇದ್ದವರನ್ನು ಆಯ್ಕೆ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ ಮತ್ತು ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದರು
ಈ ಸಂದರ್ಭದಲ್ಲಿ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಹೂಹಳ್ಳಿ ಎಕ್ಸ್ ಲೆಂಟ್ ರಂಗಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷರಾದ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ವೈ.ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್, ಸೇರಿದಂತೆ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು.