ನವದೆಹಲಿ:- ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೇಂದ್ರದ ಯೋಜನೆಯಡಿ 5 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ದೊರಕಲಿದೆ.
ಹೌದು, ಮಹಿಳೆಯರನ್ನು ಉದ್ಯಮಶೀಲತೆ ಕ್ಷೇತ್ರದಲ್ಲಿ ಅವರನ್ನು ಮುಂದೆ ತರುವುದು, ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಹೌದು. ಲಕ್ ಪತಿ ದೀದಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ರೆ ಸಿಗಲಿದೆ 5 ಲಕ್ಷ ರೂಪಾಯಿಗಳವರೆಗೆ ಸಾಲ ದೊರೆಯಲಿದೆ. ಯೋಜನೆಯಡಿ, ದೇಶಾದ್ಯಂತ ಹಳ್ಳಿಗಳಲ್ಲಿ 3 ಕೋಟಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ. ಮಹಿಳೆಯರು ಯಾವುದೇ ಬಡ್ಡಿಯಿಲ್ಲದೆ 1 ಲಕ್ಷದಿಂದ 5 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯುತ್ತಾರೆ. ಇದರೊಂದಿಗೆ, ಸರ್ಕಾರವು ಅವರಿಗೆ ಉತ್ತಮ ಮಾರುಕಟ್ಟೆ ಬೆಂಬಲವನ್ನು ಒದಗಿಸುತ್ತದೆ. ಇದಕ್ಕಾಗಿ, ಮಹಿಳೆಯರು ಸ್ವಸಹಾಯ ಗುಂಪುಗಳೊಂದಿಗೆ ಸಂಬಂಧ ಹೊಂದಿರುವುದು ಅವಶ್ಯಕ. ಅಲ್ಲಿ ಅವರಿಗೆ ಸರ್ಕಾರವು ಆರ್ಥಿಕ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡುತ್ತದೆ ಮತ್ತು ತಂತ್ರಜ್ಞಾನದ ಬಳಕೆಯ ಬಗ್ಗೆಯೂ ತಿಳಿಸಲಾಗುತ್ತದೆ ಎಂದು ಹೇಳಲಾಗಿದೆ.
ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ..!
ಈ ದಾಖಲೆಗಳು ಕಡ್ಡಾಯ
ಆಧಾರ್ ಕಾರ್ಡ್
ಪ್ಯಾನ್ ಕಾರ್ಡ್
ವಿಳಾಸ ಪುರಾವೆ
ಆದಾಯ ಪ್ರಮಾಣ ಪತ್ರ
ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ
ಬ್ಯಾಂಕ್ ಖಾತೆ ವಿವರಗಳು
ಪಾಸ್ಪೋರ್ಟ್ ಫೋಟೋ
ಇಮೇಲ್ ಐಡಿ