ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ ಕೆಲವು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದೆ. ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಸಾವಿರಾರು ಮಂದಿ ಈ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು, ಕೆಲ ಯಜಮಾನಿ ಮಹಿಳೆಯರಿಗೆ ಹಣ ಬಾರದೇ ಇರುವ ಬಗ್ಗೆ ದೂರುಗಳು ಬರುತ್ತಿವೆ.
ಈ ಸಮಸ್ಯೆ ನಿವಾರಣೆಗಾಗಿ ಯಜಮಾನಿಯರು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸರ್ಕಾರ ತಿಳಿಸಿದೆ. ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 ಹಣ ಬಾರದ ಮಹಿಳೆಯರು, ತಪ್ಪದೇ ಕೆವೈಸಿ ಮಾಡಿಸುವಂತೆ ತಿಳಿಸಿದೆ. ಅಲ್ಲದೇ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕು. ರೇಷನ್ ಕಾರ್ಡ್ ನಲ್ಲಿರೋ ಪ್ರತಿಯೊಬ್ಬ ಸದಸ್ಯರ ಕೆವೈಸಿ ಅಪ್ ಡೇಟ್ ಆಗಿರಬೇಕು.
Anna Bhagya Scheme: ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣವು ಇನ್ನೂ ಬಂದಿಲ್ವಾ..? ಈ ಕೆಲಸ ಮಾಡಿ ಸಾಕು
ಇನ್ನೂ ರೇಷನ್ ಕಾರ್ಡ್ ಸದಸ್ಯರು ಬ್ಯಾಂಕ್ ಗಳಿಗೆ ತೆರಳಿ ತಮ್ಮ ಆಧಾರ್ ಸಂಖ್ಯೆ ನೀಡಿ, ಕೈವೈಸಿ ಅಪ್ ಡೇಟ್ ಮಾಡಿಸಬೇಕು. ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು NPCI ಮಾಡಿಸೋದು ಕಡ್ಡಾಯ ವಾಗಿದೆ. ಬ್ಯಾಂಕ್ ಖಾತೆಯಲ್ಲಿನ ಹೆಸರು,
ಆಧಾರ್ ಕಾರ್ಡ್ ನಲ್ಲಿನ ಹೆಸರು ಒಂದೇ ಆಗಿದ್ಯಾ ಅಂತ ಚೆಕ್ ಮಾಡಿ. ತಪ್ಪಿದ್ದರೇ ಸರಿ ಪಡಿಸಿಕೊಳ್ಳುವಂತೆ ತಿಳಿಸಿದೆ. ಈ ಎಲ್ಲಾ ತಾಂತ್ರಿಕ ಸಮಸ್ಯೆಯನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾದಂತ ಯಜಮಾನಿ ಮಹಿಳೆಯರು ಮಾಡಿಕೊಂಡಿದ್ದೇ ಆದಲ್ಲಿ, ಪ್ರತಿ ತಿಂಗಳು ರೂ.2000 ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಅಂತ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.