ಬೆಂಗಳೂರು: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವ ವಿಚಾರಕ್ಕೆ ಸಚಿವ ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯೇ ನೀಡಿದರು. ಬೆಂಗಳೂರಲ್ಲಿಂದು ಮಾತನಾಡಿದ ಅವರು, ಚಂದ್ರಶೇಖರನ್ ಒಬ್ಬ ಒಳ್ಳೆಯ ಅಧಿಕಾರಿ. ಅವರ ಆತ್ಮಹತ್ಯೆಯಿಂದ ತುಂಬ ಬೇಸರವಾಗಿದೆ. ಡೆತ್ ನೋಟ್ನಲ್ಲಿ ಕೆಲವು ಆರೋಪಗಳನ್ನು ಮಾಡಿದ್ದಾರೆ.
ಪ್ರಕರಣವನ್ನು ಸರ್ಕಾರ ಕೂಡಲೇ ತನಿಖೆಗೆ ಒಪ್ಪಿಸಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ. ಆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಇಲ್ಲಿ ದಲಿತರು ದಲಿತೇತರ ಹಣ ಅಂತಲ್ಲ. ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗಲ್ಲ. ಈಶ್ವರಪ್ಪ ಪ್ರಕರಣವೇ ಬೇರೆ, ಇದು ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ.
Anna Bhagya Scheme: ಮೇ ತಿಂಗಳ ಅನ್ನಭಾಗ್ಯ ಯೋಜನೆಯ ಹಣವು ಇನ್ನೂ ಬಂದಿಲ್ವಾ..? ಈ ಕೆಲಸ ಮಾಡಿ ಸಾಕು
ವಿರೋಧ ಪಕ್ಷದವರು ರಾಜೀನಾಮೆ ಕೇಳ್ತಾರೆ. ಸತ್ಯಾಸತ್ಯತೆ ಹೊರಗಡೆ ಬರಲಿ. ಆ ನಂತರ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಿದರು. ಸರ್ಕಾರ ಪಿತೂರಿ ನಡೆಸುತ್ತಿದೆ ಎಂಬ ಪ್ರಜ್ವಲ್ ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸುತ್ತಾ, ಪಿತೂರಿ ಪ್ರಶ್ನೆಯೇ ಬರುವುದಿಲ್ಲ. ಅವರೇ ಎಲ್ಲವನ್ನೂ ಮಾಡಿರೋದು. ಹಾಗಿದ್ದಾಗ ಪಿತೂರಿ ಪ್ರಶ್ನೆ ಯಾಕೆ ಬರುತ್ತೆ? ಎಸ್ಐಟಿ ತನಿಖೆಯಲ್ಲಿ ಸರ್ಕಾರ ಯಾಕೆ ಹಸ್ತಕ್ಷೇಪ ಮಾಡುತ್ತದೆ? ಎಂದರು.